ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಕಾಮುಕನೊಬ್ಬ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. 20 ವರ್ಷದ ಯುವಕ ಬೀದಿನಾಯಿನ್ನು ಕಾಮತೃಷೆಗೆ ಬಳಸಿಕೊಂಡ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹೆಣ್ಣು ನಾಯಿಯನ್ನು ಎಳೆದೊಯ್ದು ಅದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಾಣಿ ರಕ್ಷಣಾ ಸಂಸ್ಥೆಯ ಮುಖ್ಯಸ್ಥೆ ಸವಿತಾ ಮಹಾಜನ್ ಅವರು, ಹೆಣ್ಣು ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನ ವಿರುದ್ಧ ವಕೋಲಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ತೌಫಿಕ್ ಅಹಮ್ಮದ್ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.