ಮುಂಬೈ: ದಟ್ಟವಾದ ಮಂಜು, ಹವಾಮಾನ ವೈಪರೀತ್ಯದಿಂದಾಗಿ ಮುಂಬೈ, ಬೆಂಗಳೂರು ಹಾಗೂ ಉತ್ತರ ಭಾರತದ ಹಲವೆಡೆಗಳಲ್ಲಿ ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ಹಲವೆಡೆ ವಿಮಾನ ಹಾರಾಟ ವಿಳಂಬವಾಗಿದ್ದರಿಂದ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಡಿಜಿಸಿಎ, ಬಿಸಿಎಸಿ ಇಂಡಿಗೋ ವಿಮಾನ ಸಂಸ್ಥೆಗೆ ಕೋಟ್ಯಂತರ ರೂಪಾಯಿ ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ವಿಮಾನದ ರನ್ ವೇಯಲ್ಲಿ ಕುಳಿತು ಊಟ ಮಾಡಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ ಹಾಗೂ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ಇಂಡಿಗೋ ವಿಮಾನ ಸಂಸ್ಥೆಗೆ 1.20 ಕೋಟಿ ರೂಪಾಯಿ ದಂಡ ವಿಧಿಸಿದೆ. ವಿಮಾನಯಾನ ಸಂಸ್ಥೆಗೆ ವಿಧಿಸಿದ ಅತಿ ದೊಡ್ಡ ಮೊತ್ತದ ದಂಡ ಇದಾಗಿದೆ.
ಇದೇ ವೇಳೆ ಮುಂಬೈ ವಿಮಾನ ನಿಲ್ದಾಣಕ್ಕೂ ದಂಡ ವಿಧಿಸಲಾಗಿದೆ. ಮುಂಬೈ ಏರ್ ಪೋರ್ಟ್ ಬಿಸಿಎಸಿ 60 ಲಕ್ಷ ರೂಪಾಯಿ ದಂಡ ವಿಧಿಸಿದ್ದರೆ, ಡಿಜಿಸಿಎ 30 ಲಕ್ಷ ದಂಡ ವಿಧಿಸಿದೆ. ಏರ್ ಪೋರ್ಟ್ ಅಧಿಕಾರಿಗಳು 90 ಲಕ್ಷ ದಂಡ ಪಾವತಿಸಬೇಕಿದೆ.