
ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಮುಂಬೈ-ಅಮೃತಸರ ಎಕ್ಸ್‌ಪ್ರೆಸ್ ರೈಲಿಗೆ ಮಂಗಳವಾರ ಬೆಂಕಿ ಹೊತ್ತಿಕೊಂಡಿದೆ.
ಭರೂಚ್ ನಿಲ್ದಾಣದಲ್ಲಿ ಉರಿಯುತ್ತಿರುವ ಕಂಪಾರ್ಟ್‌ಮೆಂಟ್‌ಗಳಿಂದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಅಪಘಾತದ ಸುದ್ದಿ ತಿಳಿದ ಕೂಡಲೇ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ರೈಲಿನಿಂದ ಹೊಗೆ ಬರುತ್ತಿದ್ದರಿಂದ ಪ್ರಯಾಣಿಕರು ಭಯಭೀತರಾಗಿದ್ದರು. ಎಂಜಿನ್‌ನಿಂದ ಎರಡನೇ ಕಂಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹಠಾತ್ ಬೆಂಕಿ ಕಾಣಿಸಿಕೊಂಡ ನಂತರ ರೈಲು 45 ನಿಮಿಷಗಳ ಕಾಲ ನಿಂತಿತು. ಅಗ್ನಿಶಾಮಕ ದಳದ ಜತೆಗೆ ಪೊಲೀಸರೂ ಸ್ಥಳದಲ್ಲಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.