![](https://kannadadunia.com/wp-content/uploads/2021/01/lakhvi.jpg)
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್ ಎ ತೋಯ್ಬಾ ಕಮಾಂಡರ್ ಝಾಕಿ ಉರ್ ರೆಹಮಾನ್ ಲಖ್ವಿಗೆ ಭಯೋತ್ಪಾದನೆಗೆ ಧನಸಹಾಯ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಝಾಕಿರ್ ಉರ್ ರೆಹಮಾನ್ ಲಖ್ವಿಯನ್ನು ಪಂಜಾಬ್ ಪ್ರಾಂತ್ಯದಲ್ಲಿ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ದಳ ಅಧಿಕಾರಿಗಳು ವಿಚಾರಣೆ ನಡೆಸಿದ ಒಂದು ದಿನದ ನಂತರ ಕೋರ್ಟ್ ಈ ಕ್ರಮ ಕೈಗೊಂಡಿದೆ. ಆತನನ್ನು ಕಳೆದ ವಾರ ಬಂಧಿಸಲಾಗಿತ್ತು. 2015 ರಲ್ಲಿ ಮುಂಬೈ ದಾಳಿ ಪ್ರಕರಣದಲ್ಲಿ ಸಂಚುಕೋರನಾಗಿದ್ದ ಲಖ್ವಿ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ ಬಂಧಿತನಾಗಿದ್ದ. ವಿಚಾರಣೆ ನಡೆಸಿದ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.