ಮುಂಬೈ: ಚಲಿಸುತ್ತಿದ್ದ BMW ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದ್ದು, ನಡುರಸ್ತೆಯಲ್ಲಿಯೇ ಕಾರು ಹೊತ್ತಿ ಉರಿದ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಜೋಗೇಶ್ವರಿ ಸೇತುವೆ ಮೇಲೆ ಬರುತ್ತಿದ್ದ BMW ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ರಸ್ತೆ ಮಧ್ಯೆಯೇ ಕಾರು ನಿಲ್ಲಿಸಿ ಕಾರಿನಿಂದ ಇಳಿದು ಓಡಿದ್ದಾನೆ. ಕ್ಷಣಾರ್ಧದಲ್ಲಿ ಕಾರು ಧಗಧಗನೆ ಹೊತ್ತಿ ಉರಿದಿದೆ.
ರಸ್ತೆ ಮಧ್ಯೆಯೇ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮುಗಿಲೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ವ್ಯಾಪ್ತಿಸುತ್ತಿದ್ದಂತೆ ಇತರ ವಾಹನ ಸವಾರರು ಆತಂಕಗೊಂಡಿದ್ದಾರೆ. ನೋಡ ನೋಡುತ್ತಿದ್ದಂತೆಯೇ ಕಾರು ಸುಟ್ಟು ಕರಕಲಾಗಿದೆ.