ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರಾಗಿದೆ.
ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 50 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದೆ.
ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಜುಲೈ 19ರಂದು ಉದ್ಯಮಿ ರಾಜ್ ಕುಂದ್ರಾನನ್ನು ಬಂಧಿಸಿದ್ದರು. ನೀಲಿ ಚಿತ್ರಗಳ ನಿರ್ಮಾಣ ಜಾಲದಲ್ಲಿ ರಾಜ್ ಕುಂದ್ರಾ ಪ್ರಮುಖ ರೂವಾರಿ ಎಂಬುದು ಸಾಬೀತಾಗಿತ್ತು. ಇದೀಗ ಮುಂಬೈ ನ್ಯಾಯಾಲಯ ಕುಂದ್ರಾಗೆ ಜಾಮೀನು ಮಂಜೂರು ಮಾಡಿದೆ.