
ಭದ್ರತಾ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿಯ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಆದೇಶಿಸಿದೆ.
ಷೇರು ಮಾರುಕಟ್ಟೆ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ. ಸೆಬಿಯ ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಸ್ಥಳೀಯ ಪತ್ರಕರ್ತ ಸಪನ್ ಶ್ರೀವಾಸ್ತವ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸೆಬಿಯ ನಿರ್ಲಕ್ಷ್ಯ ಮತ್ತು ಕುತಂತ್ರಕ್ಕೆ ಪುರಾವೆಗಳಿವೆ ಎಂದು ಹೇಳಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ತಿಳಿಸಿದೆ.
ಇತ್ತೀಚೆಗೆ ಮಾಧವಿ ಪುರಿ ಬುಚ್ ಅವರ ಅಧಿಕಾರಾವಧಿ ಮುಕ್ತಾಯವಾಗಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ಸಂಭವಿಸಿದೆ. ಈ ಆದೇಶವು ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳಿಗೆ ಸಂಕಷ್ಟ ತಂದಿದೆ.