alex Certify BREAKING NEWS: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ, ಉದ್ಯಮಿ ರಿಯಾಜ್ ಭಾಟಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ, ಉದ್ಯಮಿ ರಿಯಾಜ್ ಭಾಟಿ ಅರೆಸ್ಟ್

ಮುಂಬೈ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಉದ್ಯಮಿ ರಿಯಾಜ್ ಭಾಟಿಯನ್ನು ಬಂಧಿಸಿದ್ದಾರೆ.

ಮುಂಬೈ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳ ಸೋಮವಾರ ಉದ್ಯಮಿ ರಿಯಾಜ್ ಭಾಟಿಯಾನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ್ದ ಭಾಟಿಗೆ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಲಿಗೆ ಪ್ರಕರಣದಲ್ಲಿ ಬೇಕಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವರ್ಸೋವಾ ಮೂಲದ ಉದ್ಯಮಿಯೊಬ್ಬರನ್ನು ಬೆದರಿಸಿ ಅವರಿಂದ 30 ಲಕ್ಷ ರೂಪಾಯಿ ಮೌಲ್ಯದ ಕಾರ್ ಮತ್ತು 7.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಇಬ್ರಾಹಿಂ ಆಪ್ತ ಸಹಾಯಕ ಛೋಟಾ ಶಕೀಲ್ ಮತ್ತು ಶಕೀಲ್ ಅವರ ಸಂಬಂಧಿ ಸಲೀಂ ಫ್ರೂಟ್ ಅವರನ್ನೂ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...