
ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಪ್ರಸ್ತುತ ಭಾರತದಲ್ಲಿನ ಪ್ರವಾಸದಲ್ಲಿ ಸಮಯವನ್ನು ಆನಂದಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮುಂಬೈನಲ್ಲಿ ಕಾಣಿಸಿಕೊಂಡು ನಗರದಲ್ಲಿ ಮಕ್ಕಳ ಗುಂಪಿನೊಂದಿಗೆ ಗಲ್ಲಿ ಕ್ರಿಕೆಟ್ ಆಡುತ್ತಿರುವುದು ಕಂಡುಬಂದಿದೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಬಾರ್ಡರ್ – ಗವಾಸ್ಕರ್ ಟ್ರೋಫಿಯಲ್ಲಿ ಭಾರತ ವಿರುದ್ಧದ ಅಂತಿಮ ಎರಡು ಟೆಸ್ಟ್ ಗಳಿಂದ ಎಡಗೈ ಬ್ಯಾಟರ್ ಹೊರಗುಳಿದಿದ್ದರು. ಇದೀಗ ಮುಂಬರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಏಕದಿನ ಪಂದ್ಯಾವಳಿಗೂ ಮುನ್ನ ಭಾರತದಲ್ಲಿ ಸಮಯ ಕಳೆಯುತ್ತಿದ್ದಾರೆ.
ಮಾರ್ಚ್ 17 ರಿಂದ ಪ್ರಾರಂಭವಾಗುವ ಭಾರತ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ವಾರ್ನರ್ ಸಮಯಕ್ಕೆ ಸರಿಯಾಗಿ ಫಿಟ್ ಆಗುವ ಸಾಧ್ಯತೆಯಿದೆ. ಮೊದಲ ಅಂತರಾಷ್ಟ್ರೀಯ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.