ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನವಿ ಮುಂಬೈನ ನೆರೂಲ್ ಪ್ರದೇಶದ ಸೆಕ್ಟರ್ 17 ರಲ್ಲಿ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ವರದಿಗಳ ಪ್ರಕಾರ, ಜಿಮ್ಮಿ ಪಾರ್ಕ್ ಹಾಲ್ ಪ್ರದೇಶದ 5 ರಿಂದ 1 ನೇ ಮಹಡಿಯವರೆಗಿನ ವಸತಿ ಸಂಕೀರ್ಣ ಕುಸಿದಿದೆ. ನೆರೂಲ್, ಬೇಲಾಪುರ್, ವಾಶಿ ಮತ್ತು ಕೋಪರ್ಖೈರನ್ಸ್ ಪ್ರದೇಶದ ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದೆ.