alex Certify ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆಯಲ್ಲೇ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಮುಂಬೈ: ಇಲ್ಲಿನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಸಂಜೆ ಟಿವಿ ಧಾರಾವಾಹಿ ‘ಗಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಸೆಟ್‌ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸದ್ಯಕ್ಕೆ ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಟುಡಿಯೊದಿಂದ ದಟ್ಟವಾದ ಕಪ್ಪು ಹೊಗೆ ಹೊರಸೂಸುತ್ತಿದ್ದು, ಕನಿಷ್ಠ 12 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...