ನಿನ್ನೆಯ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಡೆಲ್ಲಿ ಕ್ಯಾಪಿಟಲ್ಸ್ ಜಯಭೇರಿ ಸಾಧಿಸಿದೆ. ಸೋಲಿನ ಬಗ್ಗೆ ತಲೆ ತಲೆಕೆಡಿಸಿಕೊಳ್ಳದೆ ಎಂ ಎಸ್ ಧೋನಿಯವರ ಬ್ಯಾಟಿಂಗ್ ಗಾಗಿ ಕಾದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವೇ ಸಿಕ್ಕಿದೆ. ಎಂ ಎಸ್ ಧೋನಿ ಕೇವಲ 16 ಎಸೆತಗಳಲ್ಲಿ 37 ರನ್ ಬಾರಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಮುಖಿಯಾಗಲಿದ್ದು, ಜಯದ ಹುಡುಕಾಟದಲ್ಲಿರುವ ಮುಂಬೈ ಇಂಡಿಯನ್ಸ್ ತನ್ನ ಓಂ ಗ್ರೌಂಡ್ ನಲ್ಲಿ ಮೊದಲ ಜಯ ಸಾಧಿಸಲಿದೆಯಾ ಕಾದು ನೋಡಬೇಕಾಗಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ ಎರಡು ಪಂದ್ಯಗಳಲ್ಲೂ ಜಯಭೇರಿ ಆಗಿದ್ದು, ತನ್ನ ಜಯದ ಓಟವನ್ನು ಮುಂದುವರಿಸುವ ಲೆಕ್ಕಚಾರದಲ್ಲಿದೆ.