ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದು ರನ್ ಗಳಿಂದ ರೋಚಕ ಜಯ ಸಾಧಿಸಿದ್ದು, ತನ್ನ ಸೆಮಿ ಫೈನಲ್ ಆಸೆಯನ್ನು ಇನ್ನು ಜೀವಂತವಾಗಿಸಿಕೊಂಡಿದೆ. ಈ ಬಾರಿ ಐಪಿಎಲ್ ನಲ್ಲಿ ಎರಡು ಬಾರಿ ಹೊಸ ದೊಡ್ಡ ಮೊತ್ತಗಳನ್ನು ಕಲೆ ಹಾಕುವ ಮೂಲಕ ಐಪಿಎಲ್ ನಲ್ಲಿ ದಾಖಲೆ ಬರೆದಿರುವ ಹೈದರಾಬಾದ್ ತಂಡ ಸೆಮಿ ಫೈನಲ್ ಗೆ ಬರಬೇಕೆಂಬುವುದು ಅಭಿಮಾನಿಗಳ ಆಶಯವಾಗಿದೆ.
ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ. ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿರುವ ಕೆಕೆಆರ್ ತಂಡ ಇನ್ನೇನು ಸೆಮಿ ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದ್ದು, ಇಂದಿನ ಪಂದ್ಯದಲ್ಲಿ ಗೆದ್ದು ಖಚಿತಪಡಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೆಮಿ ಫೈನಲ್ ಹಾದಿ ತುಂಬಾ ಕಷ್ಟಕರವಾಗಿದ್ದು, ಉಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯವಿದೆ.