ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕಾಂಡಿವಲಿ ಪ್ರದೇಶದಲ್ಲಿ ಒಂಬತ್ತು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಗ್ನಿ ದುರಂತದಲ್ಲಿ ಮೂವರು ಗಾಯಗೊಂಡಿದ್ದಾರೆ.
ಮುಂಬೈ ಅಗ್ನಿಶಾಮಕ ದಳ ಸಿಬ್ಬಂದಿ ಇಂದು ಮಧ್ಯಾಹ್ನ 12:27 ಕ್ಕೆ ಬೆಂಕಿಯ ಮಾಹಿತಿ ಪಡೆದ ನಂತರ ಪವನ್ ಧಾಮ್ ವೀಣಾ ಸಂತೂರ್ ಕಟ್ಟಡಕ್ಕೆ ಅಗ್ನಿಶಾಮಕ ವಾಹನಗಳೊಂದಿಗೆ ಧಾವಿಸಿದ್ದಾರೆ. ಕೂಡಲೇ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗಿದೆ.
ಕಾಂಡಿವಲಿ ಪಶ್ಚಿಮದ ಮಹಾವೀರ್ ನಗರದ ಪವನ್ ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 3 ಮಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#UPDATE | Mumbai Fire | 2 people lost their lives and 3 persons are injured in the fire that broke out in the Pavan Dham Veena Santur Building of Mahaveer Nagar in Kandivali West earlier today: BMC https://t.co/kIihHcIW2U
— ANI (@ANI) October 23, 2023