alex Certify ವಿದೇಶದಿಂದ ಬಂದವನಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಿಂದ ಬಂದವನಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಹೆರಾಯಿನ್ ಸೀಜ್

ಮುಂಬೈ: ಮಹತ್ವದ ಕಾರ್ಯಾಚರಣೆ ನಡೆಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 35 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಸೀಜ್ ಮಾಡಿದ್ದಾರೆ.

ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೈರೋಬಿಯಾದಿಂದ ಆಗಮಿಸಿದ್ದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 4.98 ಕೆಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 35 ಕೋಟಿ ರೂ. ಎಂದು ಹೇಳಲಾಗಿದೆ.

ಆರೋಪಿ ವಿದೇಶಿ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...