ಮುಂಬೈ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹದ ಸ್ಥಳವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ಗೆ ಆಹ್ವಾನವಿಲ್ಲದೆ ನುಸುಳಿದ್ದ ಇಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಒಬ್ಬ ವ್ಯಕ್ತಿ ವೆಂಕಟೇಶ ನರಸಯ್ಯ ಅಲ್ಲೂರಿ(26) ಯೂಟ್ಯೂಬರ್ ಆಗಿದ್ದು, ಮತ್ತೊಬ್ಬ ಉದ್ಯಮಿ ಎಂದು ಹೇಳಿಕೊಂಡ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್(28). ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ
ಮುಂಬೈನ ಬಿಕೆಸಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಂಧ್ರಪ್ರದೇಶದಿಂದ ಬಂದಿದ್ದರು. ನೊಟೀಸ್ ಜಾರಿ ಮಾಡಿ ಕಾನೂನು ಕ್ರಮ ಕೈಗೊಂಡ ಪೊಲೀಸರು ಎರಡೂ ಪ್ರಕರಣಗಳ ಆರೋಪಿಗಳನ್ನು ಬಿಡುಗಡೆಗೊಳಿಸಿದ್ದಾರೆ.