ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಹತ್ವದ ಮಾಹಿತಿ ನೀಡಿದ್ದಾರೆ.
28 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರು ಸೇತುವೆ ಬಳಿ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಅ.6ರಂದು ಮುಂಜಾನೆ ಅವರು ನದಿಗೆ ಹಾರಿರುವ ಬಗ್ಗೆ ಮಾಹಿತಿ ಬಂದಿತ್ತು. ಸತತ ಕಾರ್ಯಾಚರಣೆ ಬಳಿಕ ಇಂದು ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲಾಗಿದೆ. ಹಣಕ್ಕಾಗಿ ಬೆದರಿಕೆ ಹಾಕಿರುವ ಬಗ್ಗೆ ದೂರು ಬಂದಿದೆ. ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳಿಗೆ ದೇಶ ಬಿಟ್ಟು ಹೋಗದಂತೆ ಎಲ್ ಒ ಸಿ ಜಾರಿ ಮಾಡಿದ್ದೇವೆ. ಮುಮ್ತಾಜ್ ಅಲಿ ವಾಯ್ಸ್ ನೋಟ್ ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಹೇಳಿದ್ದಾರೆ. ಆರೋಪಿ ರೆಹಮತ್ ಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಮುಮ್ತಾಜ್ ಅಲಿ ಆತ್ಮಹತ್ಯೆಗೂ ಮುನ್ನ ಅವರ ಕಾರು ಬಸ್ ಗೆ ಡಿಕ್ಕಿ ಹೊಡೆದಿದೆ. ಬಸ್ ನವರ ಹೇಳಿಕೆಯನ್ನೂ ಪಡೆಯಲಾಗಿದೆ ಎಂದು ವಿವಿವರಿಸಿದ್ದಾರೆ.