ಬೆಂಗಳೂರು: ಚಂದಾಪುರ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಕಡತಗಳನ್ನು ಕದ್ದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಚಂದಾಪುರ ಪುರಸಭೆಯಲ್ಲಿ ನಡೆದಿದ್ದ ಅಕ್ರಮವನ್ನು ಪುರಸಭೆ ಸದಸ್ಯರು ಬಯಲು ಮಾಡಿದ್ದರು. ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ, ಆರೋಗ್ಯಾಧಿಕಾರಿ ರಮೇಶ್, ಸಿಬ್ಬಂದಿ ಅಮೃತ ಎಂಬುವವರ ವಿರುದ್ಧ ಆರೋಪ ಕೇಳಿಬಂದಿತ್ತು.
ಅಕ್ರಮ ಆರೋಪ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳು ತನಿಖೆ ನಡೆಸುತ್ತಿದ್ದರು. ತಡರಾತ್ರಿ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಪುರಸಭೆಯ ಕಡತದ ಪುಸ್ತಕಗಳನ್ನು ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.
ಪುರಸಭೆಯ ಮುಂಭಾಗದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಡ್ಡಗಟ್ಟಿ ಹಿಡಿಯಲಾಗಿದ್ದು, ಕಡತಗಳನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.