
ಬೆಂಗಳೂರು: ಆನೇಕಲ್ ನಗರದ ಹೊಸೂರು ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರವಿ ಅಲಿಯಾಸ್ ಸ್ಕ್ರಾಪ್ ಪ್ರವಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆನೇಕಲ್ ಪುರಸಭೆಯ ಬಹದ್ದೂರ್ ಪುರ 22ನೇ ವಾರ್ಡ್ ಸದಸ್ಯನಾಗಿರುವ ರವಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಯಲ್ಲಿ ಕುಟುಂಬದವರು, ಬೆಂಬಲಿಗರು ಸೇರಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.