ಮೈಸೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕಾನೂನು ಕ್ರಮ ಕೈಗೊಳ್ಳುಂತೆ ಮೈಸೂರಿನಲ್ಲಿ ದೂರು ದಾಖಲಿಸಲಾಗಿದೆ.
ಮೈಸೂರಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. ಶಾಸಕ ಮುನಿರತ್ನ, ದಲಿತರ ಬಗ್ಗೆ ಕೀಳಾಗಿ ಮಾತನಾಡಿದ್ದು, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಪತ್ರದ ಮೂಲಕ ದೂರು ನೀಡಿದ್ದಾರೆ.
ಈಗಾಗಲೇ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆಯೇ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.