ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಆರೋಪದಡಿ ವೇಲು ನಾಯ್ಕರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜಾಮೀನು ದೊರೆತಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ. ಬಾಂಡ್ ಇಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚನೆ ನೀಡಲಾಗಿದೆ. ಜಾಮೀನು ದೊರೆತ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ ಮುನಿರತ್ನ ಅವರನ್ನು ಜೈಲಿನಿಂದ ಹೊರಗೆ ಕರೆತರಲು ವಕೀಲರು ಸಿದ್ಧತೆ ಮಾಡಿಕೊಂಡಿದ್ದಾರೆ.
ಆದರೆ, ಹೊರಬಂದ ಬೆನ್ನಲ್ಲೇ ಅವರನ್ನು ಬಂಧಿಸಲು ಕಗ್ಗಲಿಪುರ ಠಾಣೆ ಪೊಲೀಸರು ಸಜ್ಜಾಗಿದ್ದಾರೆ. ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲು ಕಗ್ಗಲಿಪುರ ಠಾಣೆ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಬಳಿ ಸಜ್ಜಾಗಿದ್ದಾರೆ.