ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಸಕ ಮುನಿರತ್ನ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬಂದಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಲ್ಲದೇ ಹನಿಟ್ರ್ಯಾಪ್ ಆರೋಪ ಕೂಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಕ ಮುನಿರತ್ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಧಾನಸೌಧದ ಬಳಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ,
ದಲಿತರು, ಮಹಿಳೆಯರು, ಒಕ್ಕಲಿಗರ ಬಗ್ಗೆ ಕೀಳು ಮಟ್ಟದ ಅವಹೇಳನಕಾರಿಯಾಗಿ ಮಾತನಾಡಿರುವ, ಲಂಚಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಲ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಮ್ ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷರಾದ ಎಂ. ನಾರಾಯಣ ಸ್ವಾಮಿ, ಆರ್.ವಿ ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.