ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿರುವುದು ದೃಢಪಟ್ಟಿದೆ ಎಂದು ಚಾರ್ಚ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ 53 ಸಾಕ್ಷ್ಯಗಳ ಹೇಳಿಕೆಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
ಎಫ್ ಎಸ್ ಎಲ್ ರಿಪೋರ್ಟ್ ನಲ್ಲಿ ಆಡಿಯೋ ಧ್ವನಿ ಹಾಗೂ ಮುನಿರತ್ನ ಧ್ವನಿ ಹೋಲಿಕೆಯಾಗಿದೆ. ಮುನಿರತ್ನ ಜಾತಿ ನಿಂದನೆ ಮಾಡ್ರುವುದು ನಿಜವಾಗಿದ್ದು, ಮೂವರು ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಒಟ್ಟು 590 ಪುಟಗಳ ಚಾರ್ಜ್ ಶೀಟ್ ನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಕೆ ಮಾಡಿದ್ದಾರೆ.