ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದಲ್ಲಿ ಗಾಯಗೊಂಡಿದ್ದ ಮುನಿರತ್ನ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಲ್ಲೇಶ್ವರಂ ಕೆ.ಸಿ.ಜನರಲ್ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದ ಮುನಿರತ್ನ, ಚಿಕಿತ್ಸೆ ಬಳಿಕ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಮೊಟ್ಟೆ ದಾಳಿ ವೇಳೆ ಮುನಿರತ್ನ ಅವರ ತಲೆಗೆ ಪೆಟ್ಟಾದ ಕಾರಣ ಅವರನ್ನು ಆಬ್ಸರ್ವೇಷನ್ ನಲ್ಲಿ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಈಗ ನಾನು ಏನೂ ಹೇಳುವುದಿಲ್ಲ. ಸುದ್ದಿಗೋಷ್ಠಿಯಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿದ್ದಾರೆ.