ಬೆಂಗಳೂರು: ಶಾಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ತನ್ನ ಮೇಲೆ ಮೊಟ್ಟೆ ದಾಳಿ ನಡೆದಿದ್ದು, ದುರುದ್ದೇಶ ಪೂರ್ವಕವಾಗಿ ಹಲ್ಲೆ ನಡೆಸಿದ್ದಾರೆ. ಒಳಸಂಚು ರೂಪಿಸಿ ಹಲ್ಲೆ ಹಾಗೂ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಎಂದು ಮುನಿರತ್ನ ದೂರಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಮೊಟ್ಟೆ ಎಸೆದ ಆರೋಪಿಗಳು ಎನ್ನಲಾದ ವಿಶ್ವನಾಥ್, ಕೃಷ್ಣಮೂರ್ತಿ ಹಾಗೂ ಚಂದ್ರು ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ಮುನಿರತ್ನ ಡಿ.25ರಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದ ವೇಳೆ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಮಹಾಲಕ್ಷ್ಮೀ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.