ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ವೇಳೆ ಆರೋಪಿಗಳು ಕೂಡ ಪ್ರತಿ ದೂರು ದಾಖಲಿಸಿದ್ದಾರೆ.
ಮುನಿರತ್ನ ಮೇಲೆ ಮೊಟ್ಟೆ ಎಸೆದ ಆರೋಪದಲ್ಲಿ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವನಾಥ್, ಕೃಷ್ಣಮೂರ್ತಿ ಹಾಗೂ ಚಂದ್ರು ಬಂಧಿತ ಆರೋಪಿಗಳು. ಮೊಟ್ಟೆ ಎಸೆದಿದ್ದಾರೆ ಎನ್ನಲಾದ ಈ ಮೂವರೂ ಕೂಡ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.
ನಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ನಡೆಸಿದ್ದಾರೆ. ಮುನಿರತ್ನ ಅವರೇ ಗಲಾಟೆ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.