ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿರುವ ಮುನಿರತ್ನ ಅವರನ್ನು ಭೇಟಿಯಾಗಿ ಬಿಜೆಪಿ ಸಂಸದ ಡಾ.ಮಂಜುನಾಥ್ ಆರೋಗ್ಯ ವಿಚಾರಿಸಿದ್ದಾರೆ.
ಮುನಿರತ್ನ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಮಂಜುನಾಥ್, ಮುನಿರತ್ನ ತಲೆಯ ಹಿಂಭಾಗದಲ್ಲಿ ಪೆಟ್ಟು ಬಿದ್ದಿದೆ. ಕೆಮಿಕಲ್ ಮಾದರಿ ಪದಾರ್ಥದಿಂದ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಮೊಟ್ಟೆ ದಾಳಿಯಿಂದ ಮುನಿರತ್ನ ಅವರ ಕೂದಲು ಸ್ವಲ್ಪ ಬರ್ನ್ ಆಗಿದೆ. ತಲೆಸುತ್ತು, ವಾಂತಿ ಬಂದಂತೆ ಆಗ್ತಿದೆ, ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಟಿ ಸ್ಕ್ಯಾನ್ ಮಾಡಲು ಸೂಚಿಸಿದ್ದೇನೆ. ಸಿಟಿ ಸ್ಕ್ಯಾನ್ ಬಳಿಕ ಗೊತ್ತಾಗಲಿದೆ ಎಂದು ತಿಳಿಸಿದರು.
ಹಲವು ತಿಂಗಳಿಂದ ಕೆಲವು ರಾಜಕೀಯ ಘಟನೆಗಳನ್ನು ನೋಡಿದರೆ ಮುನಿರತ್ನ ಅವರನ್ನು ತಾರ್ಗೆಟ್ ಮಾಡುತ್ತಿದ್ದಂತೆ ಕಾಣುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದು ಹೇಳಿದರು.