alex Certify ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..?

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ.

ಬಿಜೆಪಿ ವರಿಷ್ಠರು ಮುನಿರತ್ನ ಸೇರ್ಪಡೆಗೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲವೆಂದು ಹೇಳಲಾಗಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಮುನಿರತ್ನ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರ ಒಪ್ಪಿಗೆಗೆ ಕಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾತ್ರಿಯೇ ವರಿಷ್ಠರಿಗೆ ಕರೆ ಮಾಡಿ ಮಾತನಾಡಿದ್ದು, ಮುನಿರತ್ನ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುನಿರತ್ನ, ಸಿಎಂ ಯಡಿಯೂರಪ್ಪ ಕೊಟ್ಟ ಮಾತು ತಪ್ಪುವ ನಾಯಕರಲ್ಲ. ಅವರ ಕೊಟ್ಟ ಮಾತು ಉಳಿಸಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸದಲ್ಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ನಕಲಿ ವೋಟರ್ ಐಡಿ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಬಗೆಹರಿದ ನಂತರ ಮುನಿರತ್ನ ಸಚಿವರಾಗಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...