
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾಜಾನನ ಭಟ್, ಆರೋಪಿಗಳಾದ ಲೋಹಿತ್, ಕಿರಣ್ ಹಾಗೂ ಮಂಜುನಾಥ್ ಎಂಬುವವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಜಾಮೀನಿಗಾಗಿ ಸಿದ್ಧತೆ ನಡೆಸಿದ್ದಾರೆ.