ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಮಾಡಿದ್ರೆ ಹೇಗೆ? ದೂರು ಆಧರಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ನಾವು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮಗೆ ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಅದರ ಪ್ರಕಾರ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.