ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತೆ ಪುತ್ರನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಇನ್ಸ್ ಪೆಕ್ಟರ್ ವಿರುದ್ಧ ಮಾಜಿ ಕಾರ್ಪೊರೆಟರ್ ವೇಲು ನಾಯ್ಕ್ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಮುನಿರತ್ನ ಬೆಂಬಲಿಗರಿಂದ ಸಂತ್ರಸ್ತೆ ಪುತ್ರನಿಗೆ ಜೀವಬೆದರಿಕೆ ಹಾಕಲಾಗಿದೆ. ಇದೇ ವಿಚಾರವಾಗಿ ಮಾಜಿ ಕಾರ್ಪೊರೆಟರ್ ವೇಲು ನಾಯ್ಕ್ ಹಾಗೂ ದಲಿತ ಸಂಘಟನೆ ಮುಖಂದರು ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ದೂರು ನೀಡಿದವರಿಗೆ ಹಾಗೂ ನಮಗೆ ನಿತ್ಯವೂ ಬೆದರಿಕೆ ಕರೆ ಬರುತ್ತಿದೆ. ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಕೊಡುತ್ತಲೇ ಇದ್ದಾರೆ. ಮುನಿರತ್ನ ಅಪ್ತ ಹೆಬ್ಬಗೋಡಿ ಠಾಣೆಯ ಇನ್ಸ್ ಪೆಕ್ಟರ್ ಐಎನ್ ರೆಡ್ಡಿ ಸಸ್ಪೆಂಡ್ ಮಾಡುವಂತೆಯೂ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಹೆಬ್ಬಗೋಡಿ ಠಾಣೆ ಪಿಐ ಐಎನ್ ರೆಡ್ಡಿ ಸಾಕ್ಷಿ ನಾಶಕ್ಕೆ ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಠಾಣೆ ಪಿಐ ಮುನಿರತ್ನಗೆ ವಿರೋಧಿಗಳಫೋನ್ ಟ್ಯಾಪ್ ನಿಂದ ಹಿಡಿದು ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆ ತೀವ್ರಗೊಳಿಸುವಂತೆ ಮನವಿ ಮಾಡಿದ್ದಾರೆ.