
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಾಕ ಮುನಿರತ್ನ, ಸಚಿವ ಕೆ.ಎನ್.ರಾಜಣ್ಣಗೆ ಮಂಪರು ಪರೀಕ್ಷೆ ನಡೆಸಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, 48 ಜನರ ಸಿಡಿ ಇದೆ ಎಂದು ರಾಜಣ್ಣ ಹೇಳಿದ್ದಾರೆ. ಅವರಿಗೆ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮಂಪರು ಪರೀಕ್ಷೆ ಮಾಡಿಸಿ ಸತ್ಯ ಹೊರ ತರ್ಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೆಲ್ಲ ಕಾರಣ ಡಿಸಿಎಂ ಡಿ.ಕೆ.ಶಿವಕುಮಾರ್. ಡಿ.ಕೆ. ಇದನ್ನೆಲ್ಲ ಮೊದಲಿನಿಂದಲೂ ಮಾಡ್ತಾ ಬಂದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಕೊಟ್ರೆ ಸರ್ಕಾರ ಉಳಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ರಮೇಶ್ ಜಾರಕಿಹೊಳಿ ಮೇಲೆ ಷಡ್ಯಂತ್ರ ಮಾಡಿದರು, ನನ್ನ ಮೇಲೆ ಮಾಡಿದರು. ರೇವಣ್ಣ ವಿರುದ್ಧವೂ ಆರೋಪ ಮಾಡಿದರು. ಇದರ ಹಿಂದೆ ದೊಡ್ಡ ಜಾಲವೇ ಇದೆ. ಅದರ ಹಿಂದೆ ಇರುವವರು ಯಾರು ಎಂಬುದು ಹೊರಬರಬೇಕು ಎಂದರು.