ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಎಸ್ ಐಟಿ ಅಧಿಕಾರಿಗಳು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಲಂಚ ಬೇಡಿಕೆ, ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಎಸ್ ಐಟಿ ತಂಡ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದೆ. ಪ್ರಕರಣ ಸಂಬಂಧ ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಬೇಕಿದೆ. ಹೀಗಾಗಿ ಸ್ಪೀಕರ್ ಯು.ಟಿ.ಖಾದರ್ ಅನುಮತಿ ನೀಡುವಂತೆ ಎಸ್ ಐಟಿ ಕೋರಿದೆ.
ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ಸಂಬಂಧ ವೈಯ್ಯಾಲಿ ಕಾವಲ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಕಸ ಸಾಗಾಣಿಕೆ ಗುತ್ತಿಗೆ ನೀಡಲು 30 ಲಕ್ಷ ರೂಪಾಯಿ ಹಣ ನೀಡಿದ್ದಾಗಿ ಚಲುವರಾಜು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು.