ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಎಸ್ಐಟಿಗೆ ದೂರುದಾರೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಸಿಐಡಿ ಕಚೇರಿಯಲ್ಲಿ ಎಸ್ಐಟಿ ಮುಂದೆ ಸಂತ್ರಸ್ತೆ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ಬ್ಲಾಕ್ ಮೇಲ್ ಮೂಲಕ ಕೆಲವು ರಾಜಕಾರಣಿಗಳು, ಪೊಲೀಸರು ಸೇರಿ ಕೆಲ ಅಧಿಕಾರಿಗಳನ್ನು ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಹನಿ ಟ್ರ್ಯಾಪ್ ವಿಡಿಯೋ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿ ಮುನಿರತ್ನ ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದಾರೆ. ಅನಿವಾರ್ಯವಾಗಿ ಅವರು ಹೇಳಿದಂತೆ ಕೇಳಿದ್ದೇನೆ. ನಾನು ತಪ್ಪು ಮಾಡಿಲ್ಲ ಎಂದು ಸಂತ್ರಸ್ತೆ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.