ಬೆಳಗಾವಿ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಯಮ 69ರ ಅಡಿ ಮುನಿರತ್ನ ವಿರುದ್ಧ ದಾಖಲಾಗಿರುವ ಕೇಸುಗಳ ಬಗ್ಗೆ ಚರ್ಚೆ ನಡೆದಿದ್ದು, ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಚರ್ಚೆ ಆರಂಭಿಸಿದ್ದಾರೆ.
ಸದನದಿಂದ ಮುನಿರತ್ನ ಅಮಾನತ್ತಿಗೆ ನರೇಂದ್ರ ಸ್ವಾಮಿ ಒತ್ತಾಯಿಸಿದ್ದಾರೆ. ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ ಪ್ರಕರಣ ದಾಖಲಾಗಿವೆ. ಧ್ವನಿ ಅವರದ್ದೇ ಎಂದು ಎಫ್ಎಸ್ಎಲ್ ರಿಪೋರ್ಟ್ ನಲ್ಲಿ ಗೊತ್ತಾಗಿದೆ. ನಾನು ವೈಯಕ್ತಿಕ ದ್ವೇಷದಿಂದ ಈ ಬಗ್ಗೆ ಮಾತನಾಡುತ್ತಿಲ್ಲ. ಸದನದಲ್ಲಿ ಉಪಸ್ಥಿತರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಮುನಿರತ್ನ ಪ್ರಕರಣ ಕೋರ್ಟ್ ನಲ್ಲಿದೆ. ಇದರ ಬಗ್ಗೆ ಚರ್ಚೆ ಬೇಡ ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಗದ್ದಲ ಉಂಟಾಗಿದೆ.