ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಕಾಶ್ ಓಲೆಕಾರ ಕೊಲೆಯಾದ ಯುವಕ ಎಂದು ಹೇಳಲಾಗಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಪ್ರಕಾಶ್ ನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದೆ. ಬಸಪ್ಪ ಹನುಮಂತಪ್ಪ ಓಲೇಕಾರ ಮತ್ತು ಸಹಚರರು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ತಮ್ಮನ ಪತ್ನಿಯ ಜೊತೆಗೆ ಪ್ರಕಾಶ್ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯಿಂದ ಆತನ ಮೇಲೆ ಬಸಪ್ಪ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.