ಬೆಂಗಳೂರು: ಹಳೆಚಂದಾಪುರದಲ್ಲಿ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೆಚಂದಾಪುರದಲ್ಲಿ ಘಟನೆ ನಡೆದಿದೆ.
ಟಿಎಸ್ ಗ್ರಾಂಡ್ ಬೇಕರಿ ಹಿಂಭಾಗ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.