
ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆ ಮಾಡಲಾಗಿದೆ.
30 ವರ್ಷದ ಅನಿಲ್ ಬಾಳು ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಯಡೂರುವಾಡಿ ಸಮೀಪದ ಗದ್ದೆಯೊಂದರಲ್ಲಿ ಅನಿಲ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ಅಂಕಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.