
ಬೆಂಗಳೂರು: ಚಾಕುವಿನಿಂದ ಇರಿದು ನವವಿವಾಹಿತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅವತಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿ ನಿರಾಕರಿಸಿ ಬೇರೊಬ್ಬನ ಜೊತೆಗೆ ಮದುವೆಯಾಗಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ. 23 ವರ್ಷದ ಸೌಮ್ಯಾ ಕೊಲೆಯಾದವರು ಎಂದು ಹೇಳಲಾಗಿದೆ. ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಪಾಗಲ್ ಪ್ರೇಮಿ ಸುಬ್ರಹ್ಮಣ್ಯ ಎಂಬಾತ ಕೊಲೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.