ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಜೋಡಿ ಕೊಲೆ ನಡೆದಿದೆ. ಹರಿ ಅಂಗಡಿ ಮಳಿಗೆಯಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ.
ಸುರೇಶ್(55), ಮಹೇಂದ್ರ(68) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿ ಭದ್ರ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.