ಬೆಂಗಳೂರು: ಚಾಕುವಿನಿಂದ ಪತ್ನಿ ಕುತ್ತಿಗೆ ಕೊಯ್ದು ಬಳಿಕ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
26 ವರ್ಷದ ಲಾವಣ್ಯ ಮೃತಪಟ್ಟವರು ಎನ್ನಲಾಗಿದೆ. ಪತ್ನಿ ಹತ್ಯೆ ಮಾಡಿದ ಪತಿ ಸಂಪತ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಡವನಹಳ್ಳಿ ಗ್ರಾಮದ ಸಂಪತ್ ಕುಮಾರ್ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಿನ್ನೆ ರಾಜಿ ಪಂಚಾಯಿತಿ ನಡೆಸಲಾಗಿತ್ತು. ರಾಜಿ ಪಂಚಾಯಿತಿ ನಡೆದ ನಂತರ ಸಂಪತ್ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಮನೆಯಲ್ಲಿದ್ದ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅತ್ತಿಬೆಲೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.