ಬೀದರ್: ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ಘಟನೆ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ 26 ವರ್ಷದ ಆನಂದ ಪುಲೆ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಆನಂದ ಮತ್ತು ದಿಗಂಬರ ದಾಸೋರೆ ಪರಸ್ಪರ ಹೊಡೆದಾಡಿಕೊಂಡಿದ್ದರು. ಹಲ್ಲೆಗೊಳಗಾದ ಆನಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.