
ಚಿಕ್ಕಮಗಳೂರು: ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿದ್ದ ಸಹೋದರನನ್ನು ಸಹೋದರಿಯರೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ರಾಘವೇಂದ್ರ(44) ಕೊಲೆಯಾದ ವ್ಯಕ್ತಿ. ಆಸ್ತಿಗಾಗಿ ತಂದೆಯನ್ನು ಕೊಲೆ ಮಾಡಿ ಜೈಲು ಸೇರಿದ್ದ ರಾಘವೇಂದ್ರ ಜಾಮೀನಿನ ಮೇಲೆ ಬಿಡುಗಡೆಯಾಗಿ ಮನೆಗೆ ಬಂದಿದ್ದ. ಆತನನ್ನು ಮೂವರು ಸಹೋದರಿಯರು ತಮ್ಮ ಗಂಡಂದಿರ ಸಹಾಯದಿಂದ ಭೀಕರವಾಗಿ ಕೊಲೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಚೌಡೇಶ್ವರಿ ಕಾಲೋನಿಯಲ್ಲಿ ಗುರುವಾರ ಘಟನೆ ನಡೆದಿದೆ. ರಾಘವೇಂದ್ರ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಗಂಡಂದಿರ ಜೊತೆ ಬಂದಿದ್ದ ಸಹೋದರಿಯರು ಆತನ ಕಣ್ಣಿಗೆ ಕಾರದಪುಡಿ ಎರಚಿ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.