
ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದು, ವೀರಶೈವ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಒತ್ತಾಯಿಸುವುದಾಗಿ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಕಲ್ಲೇಶಯ್ಯ ತಿಳಿಸಿದ್ದಾರೆ.