alex Certify ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಜನ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಜನ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಯನಹಳ್ಳಿಯಲ್ಲಿ ಕತ್ತು ಸೀಳಿ 52 ವರ್ಷದ ವೆಂಕಟಲಕ್ಷ್ಮಮ್ಮ ಅವರನ್ನು ಕೊಲೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಿಕ್ಷಕಿಯ ಮನೆಯ ಬಿಬೀವಿನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಆಗಿವೆ. ದುಷ್ಕರ್ಮಿಗಳು ಶಿಕ್ಷಕಿಯನ್ನು ಹತ್ಯೆ ಮಾಡಿ ದರೋಡೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...