alex Certify ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ನಾಗರಾಜಪ್ಪ(48) ಪತ್ನಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ನಾಗರಾಜಪ್ಪ ಜಗಳ ಮಾಡುತ್ತಿದ್ದ. ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿದ ಪಾಪಿ ಪತಿ ಪತ್ನಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ನಂತರ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...