alex Certify ಹಾಡಹಗಲೇ ರೌಡಿ ಶೀಟರ್ ಹತ್ಯೆಗೈದ ಆರೋಪಿಗಳ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ರೌಡಿ ಶೀಟರ್ ಹತ್ಯೆಗೈದ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಹಾಡಹಗಲೇ ಬ್ಯಾಂಕ್ ಗೆ ನುಗ್ಗಿ ರೌಡಿಶೀಟರ್ ಬಬ್ಲಿಯನ್ನು ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಬೆಂಗಳೂರಿನ ಕೋರಮಂಗಲದಲ್ಲಿ ಬ್ಯಾಂಕಿಗೆ ನುಗ್ಗಿ ಪತ್ನಿ ಮತ್ತು ಮಗಳ ಎದುರಲ್ಲೇ ಬಬ್ಲಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

ಕೊಲೆ ಆರೋಪಿಗಳಾದ ರವಿ ಮತ್ತು ಪ್ರದೀಪ್ ಬೇಗೂರು ಕೆರೆ ಸಮೀಪವಿರುವ ಮಾಹಿತಿ ತಿಳಿದ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿಗಳ ಬಂಧನಕ್ಕೆ ಪೊಲೀಸರು ಸೂಚನೆ ನೀಡಿದ್ದರೂ ಸಬ್ಇನ್ಸ್ಪೆಕ್ಟರ್ ಸಿದ್ದಪ್ಪ ಮತ್ತು ಎಎಸ್ಐ ರವೀಂದ್ರ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾದಾಗ ಇನ್ಸ್ ಪೆಕ್ಟರ್ ರವಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಬಳಿಕ ಆರೋಪಿಗಳನನ್ಉ ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...