ಮಂಡ್ಯ: ಸ್ನೇಹಿತರ ದಿನವೇ ಚಾಕುವಿನಿಂದ ಇರಿದು ಸ್ನೇಹಿತನನ್ನು ಕೊಲೆ ಮಾಡಲಾಗಿದೆ. ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಘಟನೆ ನಡೆದಿದೆ.
ಚಾಕುವಿನಿಂದ ಇರಿದು ಜಯಂತ್(24) ಕೊಲೆ ಮಾಡಲಾಗಿದೆ. ಜಯಂತ್ ನನ್ನು ಕೊಲೆ ಮಾಡಿ ಆರೋಪಿ ಕೀರ್ತಿ ಪರಾರಿಯಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಜಯಂತ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೆರೆಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.