ಚಿಕ್ಕಮಗಳೂರು: ಪ್ರತಿದಿನ ಕುಡಿದು ಬಂದು ಪೀಡಿಸುತ್ತಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಗೌರಿ ಕಾಲುವೆಯ ವಾಟರ್ ಟ್ಯಾಂಕ್ ಬಡಾವಣೆಯಲ್ಲಿ ನಡೆದಿದೆ.
ಸುರೇಶ(55) ಕೊಲೆಯಾದ ವ್ಯಕ್ತಿ. ಪ್ರತಿದಿನ ಮದ್ಯಪಾನ ಮಾಡಿ ಬಂದು ಸುರೇಶ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಈತನ ಕಾಟದಿಂದ ಬೇಸತ್ತು ಹೋಗಿದ್ದ ಪತ್ನಿ ಸಿಟ್ಟಿನಿಂದ ಬಡಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಸವನಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಲಾಗಿದೆ.