ಮೈಸೂರು : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕರ ನಡುವೆ ಗಲಾಟೆ ನಡೆದಿದ್ದು, 15 ವರ್ಷದ ಬಾಲಕನೋರ್ವ 16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸುನ್ನಿ ಬಳಿ ಈ ಘಟನೆ ನಡೆದಿದ್ದು, ಮಕ್ಕಳ ನಡುವೆ ಗಲಾಟೆ ನಡೆದು ಕ್ಷುಲ್ಲಕ ಕಾರಣಕ್ಕೆ ಫರಾನ್ ಖಾನ್ (16) ಎಂಬಾತನಿಗೆ 15 ವರ್ಷದ ಬಾಲಕ ಚಾಕು ಇರಿದಿದ್ದಾನೆ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ಸಾಗಿಸಿದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಅಪ್ರಾಪ್ತ ವಯಸ್ಸಿನ ಮಕ್ಕಳು ಕೊಲೆ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂಬುದು ನಿಜಕ್ಕೂ ಆತಂಕಕಾರಿ ವಿಚಾರವಾಗಿದೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಘಟನೆ ಸಂಬಂಧ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.